ಪಡುಬಿದ್ರಿ: ಹೆದ್ದಾರಿಗಡ್ಡ ಬಂದ ಶ್ವಾನಕ್ಕೆ ಢಿಕ್ಕಿಯಾಗಿ ಆ. 12ರಂದು ಹೆಜಮಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾಮಾಜಿಕ ಹೋರಾಟಗಾರ, ದಲಿತ ನಾಯಕ ಪಡುಬಿದ್ರಿ ಅಬ್ಬೇಡಿ ಸುಜ್ಲಾನ್ ಕಾಲನಿಯ ಉಮಾನಾಥ ಅವರು ಆ. 23ರಂದು ಮೃತಪಟ್ಟಿದ್ದಾರೆ.
ಅಪಘಾತದ ವೇಳೆ ಉಮಾನಾಥ ಅವರು ಸ್ಕೂಟಿ ಸಮೇತ ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗಳಾಗಿದ್ದವು. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಮಾತನಾಡುತ್ತಿರಲಿಲ್ಲ. ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿದ್ದು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದಾರೆ. ಮೃತರು ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.












