ಉಡುಪಿ: ಶ್ರೀ ಲಕ್ಷ್ಮೀನಾರಾಯಣ ದೇವರಿಗೆ ಸ್ವರ್ಣ ಕವಚ ಸಮರ್ಪಣೆ ಹಾಗೂ 82ನೇ ವಾರ್ಷಿಕ ಭಜನಾ ಮಂಗಳೋತ್ಸವ ದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ವಹಿಸಿದ್ದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು.
ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಗುರ್ಮೆ ಫೌಂಡೇಶನ್ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಉದ್ಯಮಿಗಳಾದ ಮನೋಹರ್ ಶೆಟ್ಟಿ, ಪ್ರಭಾಕರ ಪೂಜಾರಿ, ಕಿಶೋರ್ ಕುಮಾರ್ ಗುರ್ಮೆ, ಕುಮಾರ್ ಕುಂದರ್, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷ ವಿಜಯ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.