ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1,2ಎ,2ಬಿ,3ಎ,3ಬಿ, ಪ.ಜಾತಿ ಮತ್ತು ಪ.ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20. ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ದಾಖಲೆಗಳಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ಅನ್ನು ನೋಡಬಹುದಾಗಿದ್ದು, ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್, ಸಹಾಯವಾಣಿ ಸಂ: 8050770004 ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.