ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ / ಪ.ವರ್ಗದ ಮತ್ತು ಇತರೆ ಜನಾಗಂಗಳಿಗೆ ಸೇರಿದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwdನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ದಾಖಲೆಗಳಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅನ್ನು ನೋಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 8050770004 ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.