ಡಾ. ಬಿ.ಎಂ. ಹೆಗ್ಡೆ, ಎಸ್ ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ ಪ್ರಶಸ್ತಿ

ನವದೆಹಲಿ: ಹಿನ್ನೆಲೆ ಗಾಯಕ ಎಸ್‌.ಪಿ.ಬಾಲಸುಬ್ರಮಣ್ಯಂ, ರಾಜ್ಯದ ಹೃದ್ರೋಗ ತಜ್ಞ ಡಾ. ಬಿ.ಎಂ.ಹೆಗ್ಡೆ ಸೇರಿದಂತೆ ಏಳು ಮಂದಿ ಈ ಸಾಲಿನ ಪದ್ಮ ವಿಭೂಷಣ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಸಾಹಿತಿ ಚಂದ್ರಶೇಖರ ಕಂಬಾರ ಸೇರಿ ಹತ್ತು ಮಂದಿ ಪದ್ಮ ಭೂಷಣ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಪದ್ಮಶ್ರೀ ಪುರಸ್ಕಾರಕ್ಕೆ ಕಲಾ ವಿಭಾಗದಲ್ಲಿ ರಾಜ್ಯದ ಹಿರಿಯ ನೃತ್ಯ ಕಲಾವಿದೆ ಮಂಜಮ್ಮ ಜೋಗತಿ, ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಲ್ಲಿ ರಂಗಸಾಮಿ ಲಕ್ಷ್ಮೀನಾರಾಯಣ ಕಶ್ಯಪ್‌ ಮತ್ತು ಕ್ರೀಡಾ ವಿಭಾಗದಲ್ಲಿ ಕೆ.ವೈ.ವೆಂಕಟೇಶ್ ಅವರನ್ನು ಆಯ್ಕೆ ಮಾಡಲಾಗಿದೆ.