ಡಾ.ಬಾಬು ಜಗಜೀವನ ರಾಂ, ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗೆ ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ಮೇಲ್ಕಂಡ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಮಾರ್ಚ್ 18 ರ ಒಳಗೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ಕಚೇರಿಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.