ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ, ಪ.ಪಂಗಡದ ಸಂಘಟನೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಏಪ್ರಿಲ್ 14 ರಂದು ಬೆಳಗ್ಗೆ 9.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದು, ನಿವೃತ್ತ ಪ್ರಾಂಶುಪಾಲ ಪ್ರೊ.ಎಂ ಬಾಲಕೃಷ್ಣ ಶೆಟ್ಟಿ ಉಪನ್ಯಾಸ ನೀಡಲಿದ್ದಾರೆ.