Homeಕರಾವಳಿ ಸಮಾಚಾರಡಾ.ಎನ್.ಎಸ್.ಎ.ಎಂ ಪ.ಪೂ ಕಾಲೇಜು: ದ್ವಿತೀಯ ಪಿಯುಸಿ ಯಲ್ಲಿ 95% ಫಲಿತಾಂಶ

ಡಾ.ಎನ್.ಎಸ್.ಎ.ಎಂ ಪ.ಪೂ ಕಾಲೇಜು: ದ್ವಿತೀಯ ಪಿಯುಸಿ ಯಲ್ಲಿ 95% ಫಲಿತಾಂಶ

ಕಾರ್ಕಳ: ನಿಟ್ಟೆಯಲ್ಲಿರುವ ಡಾ.ಎನ್.ಎಸ್.ಎ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ಮಿಶಾ ಕುಟಿನ್ಹೊ 589 ಅಂಕ ಗಳಿಸಿ ರಾಜ್ಯಕ್ಕೆ 10 ನೇ ರ‍್ಯಾಂಕ್‌ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ಶ್ರೇಷ್ಠಾ 584 ಅಂಕ ಪಡೆದು ಕಾಲೇಜಿನ ವಾಣಿಜ್ಯ ವಿಭಾಗದ ಟಾಪರ್ ಆಗಿರುವರು.

ವಿಜ್ಞಾನ ವಿಭಾಗದಲ್ಲಿ ಒಟ್ಟು 83 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 80 ಮಂದಿ ತೇರ್ಗಡೆ ಹೊಂದಿರುತ್ತಾರೆ. ಅವರಲ್ಲಿ 41 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 120 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 113 ಮಂದಿ ತೇರ್ಗಡೆ ಹೊಂದಿದ್ದಾರೆ. ಒಟ್ಟು 35 ಮಂದಿ ವಿಶಿಷ್ಟ ಶ್ರೇಣಿಯನ್ನು ಪಡೆದಿದ್ದಾರೆ. ಡಾ.ಎನ್.ಎಸ್.ಎ.ಎಂ ಪ.ಪೂ ಕಾಲೇಜಿನ ದ್ವಿತೀಯ ಪಿ.ಯು.ಸಿ ಯ ಒಟ್ಟು ಫಲಿತಾಂಶ 95% ಆಗಿದ್ದು 76 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

error: Content is protected !!