ಉಡುಪಿ: ವರನಟ ಡಾ. ರಾಜ್ಕುಮಾರ್ ಜಯಂತಿ ಕಾರ್ಯಕ್ರಮವನ್ನು ಸೋಮವಾರ ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ವಾರ್ತಾಧಿಕಾರಿ ಮಂಜುನಾಥ್.ಬಿ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾರ್ತಾ ಸಹಾಯಕ ಶಿವಕುಮಾರ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.