ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ: ಮದರ್ ತೆರೇಸಾ ಮೆಮೋರಿಯಲ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಕುಂದಾಪುರ: ಇಲ್ಲಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಮದರ್ ತೆರೇಸಾ ಮೆಮೋರಿಯಲ್ ಶಾಲೆ ಇಲ್ಲಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಶಂಕ್ರ ಕಿರುಚಿತ್ರದಲ್ಲಿ ತನ್ನ ಅಮೋಘ ಅಭಿನಯದಿಂದ ಪ್ರಖ್ಯಾತಿ ಪಡೆದ ಬಾಲ ಕಲಾವಿದೆ ಮದರ್ ತೆರೇಸಾ ಪ್ರಾಥಮಿಕ ಶಾಲೆಯ 4ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸ್ಮಿತಾ ಬಿ.ಕೆ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಪ್ರೌಢಶಾಲಾ ವಿಭಾಗದಲ್ಲಿ ಮದರ್ ತೆರೇಸಾ ಶಾಲೆಯ 8ನೇ ತರಗತಿಯ ಅತ್ಯುತ್ತಮ ಚಂಡೆ ಹಾಗೂ ಕೊಳಲು ವಾದಕ ಪನ್ನಗ‌. ಕೆ. ಆರೂರು ಇವರು ಪ್ರಶಸ್ತಿ ಪಡೆದಿದ್ದಾರೆ. ಕೋಟ ಕಾರಂತ ಥೀಮ್ ಪಾರ್ಕಿನಲ್ಲಿ ಇದೇ ನ.30 ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿರುವುದು.

ಈ ಇಬ್ಬರು ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಬೋಧಕ- ಬೋಧಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.