ಉಡುಪಿ: ಸಾವಣ್ಣ ಪ್ರಕಾಶನ ಪ್ರಕಟಿಸಿರುವ ಡಾ. ವಿರೂಪಾಕ್ಷ ದೇವರಮನೆ ಅವರು ಬರೆದಿರುವ ನೂತನ ಪುಸ್ತಕ ‘ಥ್ಯಾಂಕ್ಯೂ ಟೀಚರ್’ (ಗುರುವೇ ನಿಮ್ಮನೆಂತು ಮರೆವೆ?) ಪುಸ್ತಕ ಲೋಕಾರ್ಪಣೆ ಸಮಾರಂಭ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಇದೇ ಡಿಸೆಂಬರ್ 19ರ ಶನಿವಾರ ಸಂಜೆ 4.30ಕ್ಕೆ ನಡೆಯಲಿದೆ.
ಜಿಲ್ಲಾಧಿಕಾರಿ ಜಿ. ಜಗದೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಪಿ. ವಿ. ಭಂಡಾರಿ, ಡಯಟ್ ಹಿರಿಯ ಉಪನ್ಯಾಸಕ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅವರಿಂದ ವಿಶೇಷ ಉಪನ್ಯಾಸ ನಡೆಯಲಿದೆ.