ಡ್ರಗ್ಸ್ ಜಾಲ ಬೇಧಿಸಿದ ಪೊಲೀಸರು: ನಾಲ್ವರ ಬಂಧನ

ಮಂಗಳೂರು: ಡ್ರಗ್ಸ್ ಜಾಲವನ್ನು ಭೇದಿಸಿದ ಮಂಗಳೂರು ನಗರ ಪೊಲೀಸರು ನಾಲ್ವರು ಯುವಕರನ್ನು ಶನಿವಾರ ಬಂಧಿಸಿದ್ದಾರೆ.
ಪೃಥ್ವಿ ಪಿ. ಕುಮಾರ್, ಕ್ಲೆವಿನ್ ಸಲ್ಡಾನಾ, ವಿ.ಎಸ್. ನಿಖಿಲ್  ಹಾಗೂ ಸಾಗರ್ ಅಮೀನ್, ಬಂಧಿತ ಆರೋಪಿಗಳು.
ಆರೋಪಿಗಳಿಂದ 1 ಕೆ.ಜಿ.‌ 200 ಗ್ರಾಂ ಗಾಂಜಾ ಹಾಗೂ ಐದು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡ್ರಗ್ಸ್ ಹಾವಳಿ ವಿರುದ್ಧ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಎಸಿಪಿ ಸೆಂಟ್ರಲ್ ಮತ್ತು ತಂಡ ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ಅತ್ತಾವರ ಬಾಬುಗುಡ್ಡೆ ಒಂದನೇ ಕ್ರಾಸ್ ರಸ್ತೆಯಲ್ಲಿ ಇವರನ್ನು ಬಂಧಿಸಲಾಗಿದೆ.