ಉಡುಪಿ: ಸೇಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಉಡುಪಿ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ -19 ಜಾಗೃತಿಯ ಅಭಿಯಾನ ವಾಹನಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೋಮವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾಂಜಲಿ ಸುವರ್ಣ, ಶಾಖೆಯ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಭಂಡಾರಿ, ಉಡುಪಿ ಶಾಖೆಯ ವ್ಯವಸ್ಥಾಪಕ ಜೀವನ್ ಡಿಸೋಜ, ಕಲ್ಯಾಣಪುರ ಶಾಖಾ ವ್ಯವಸ್ಥಾಪಕ ರೋಹಿತ್ ರೊಡ್ರಿಗಸ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.