ನಗರಸಭಾಧ್ಯಕ್ಷರಿಂದ ಮಲೇರಿಯಾ ನಿಯಂತ್ರಣ ಜನಜಾಗೃತಿ ಜಾಥಾಕ್ಕೆ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಮತ್ತು ಪೌರಾಡಳಿತದ ಸಹಯೋಗದಲ್ಲಿ “ವಿಶ್ವ ಮಲೇರಿಯಾ ದಿನ” ದ ಅಂಗವಾಗಿ, ಮದರ್ ಆಫ್ ಸಾರೋಸ್ ಚರ್ಚ್ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಯ ಆವರಣದವರೆಗೆ ನಡೆದ ಜಾಥಾ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಮದರ್ ಆಫ್ ಸಾರೋಸ್ ಚರ್ಚಿನ ಫಾದರ್, ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ, ಆರೋಗ್ಯ ಇಲಾಖೆಯ ಎಂಟಮೋಲೋಜಿಸ್ಟ್, ನ್ಯೂಸಿಟಿ, ಧನ್ವಂತರಿ, ಸಿಎಸ್‌ಐ ಲೊಂಬಾರ್ಡ ನರ್ಸಿಂಗ್ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.