ಶೆಟ್ಟಿಬೆಟ್ಟು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಉಡುಪಿ: ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶೆಟ್ಟಿಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾಯಿತು.

ಶಿಬಿರದಲ್ಲಿ ಅಧಿಕ ರಕ್ತದೊತ್ತಡ , ಮಧುಮೇಹ, ನೇತ್ರ ತಪಾಸಣೆ, ದಂತ ತಪಾಸಣೆ, ಕ್ಷಯರೋಗ ತಪಾಸಣೆ, ಆಪ್ತ ಸಮಾಲೋಚನೆ, oral cancer, Brest Cancer, ಗರ್ಭಕಂಠದ ಕ್ಯಾನ್ಸರ್‌ ತಪಾಸಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಕೋವಿಡ್ ಲಸಿಕಾ ಶಿಬಿರ ಕೂಡ ನಡೆಯಿತು. ಶಿಬಿರದಲ್ಲಿ ಒಟ್ಟು 145 ಮಂದಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶ್ಯಾಮ ರಾವ್, ಹೀರೆಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನರಸಿಂಹ ನಾಯಕ್, ಮಣಿಪಾಲ ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗದ ಡಾ. ಶ್ಯಾಮಶ್ರೀ, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ದಿನಕರ್ ಶೆಟ್ಟಿ, ಪರ್ಕಳ ಜೆ. ಸಿ.ಐಯ ಮನೋಜ್ ಪ್ರಭು, ಶೆಟ್ಟಿಬೆಟ್ಟು ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿ ರಾಗಿಣಿ, ಶ್ರೀದೇವಿ ಉಪಸ್ಥಿತರಿದ್ದರು.

ಪ್ರಾಥಮಿಕ ಆರೋಗ್ಯ ಕೇಂದ್ರದ PHCO ಯಮುನಾ ಕುಮಾರಿ, ಹರಿಣಾಕ್ಷಿ, CHO ಕವಿತಾ, ಆಶಾಕಾರ್ಯಕರ್ತೆಯರಾದ ಜಯಂತಿ, ನಳಿನಿ, ಶೋಭಾ, ಮಂಜುಳ, ಸುಗುಣ, ಮೀನಾಕ್ಷಿ , ರೂಪ ಸಹಕಾರ ನೀಡಿದರು.