ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಕಾರ್ಕಳ ತಾಲೂಕಿನ ನೀರೆ ಅಂಚೆ ಕಚೇರಿ ಸಮೀಪ ಭಾನುವಾರ ರಾತ್ರಿ 8 ಗಂಟೆಗೆ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಕಾರು ಬೈಲೂರಿನಿಂದ ಉಡುಪಿಗೆ ಬರುತ್ತಿದ್ದು, ನೀರೆ ಅಂಚೆ ಕಚೇರಿ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕಾಪು ಉಚ್ಚಿಲದ ನಿವಾಸಿಗಳೆಂದು ತಿಳಿದುಬಂದಿದೆ.