ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ
” ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ ” ಆಚರಣೆಯ ಪ್ರಯುಕ್ತವಾಗಿ ನಶಾ ಮುಕ್ತ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಸೈಬರ್ ಕ್ರೈಂ ವಿಭಾಗದ ಪವನ್ ಕುಮಾರ್ ಅವರು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತಾಗಿ ಮಾತನಾಡುತ್ತ ಯುವ ಜನತೆ ನಮ್ಮ ದೇಶದ ಭವಿಷ್ಯ. ಯುವಕ ಯುವತಿಯರು ಮಾದಕ ವ್ಯಸನದ ಹುಚ್ಚಿಗೆ ಬಲಿಯಾಗದೆ, ಉತ್ತಮ ಹಾಗೂ ಆರೋಗ್ಯವಂತ ಪ್ರಜೆಗಳಾಗಬೇಕು, ಮಾದಕ ವ್ಯಸನಿಗಳಲ್ಲೂ ಸಹ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಇತ್ತೀಚೆಗೆ ಯಾವ ಯಾವ ರೀತಿಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಮತ್ತು ಜನಸಾಮಾನ್ಯರಾದ ನಾವು ಹೇಗೆ ಸೈಬರ್ ವಂಚನೆಗಳಿಂದ ತಪ್ಪಿಸಿಕೊಳ್ಳಬಹುದು, ವಂಚನೆಗಳು ಅದಾಗ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದೆಂಬ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಜೊತೆಗೆ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕನ್ನಡ ಉಪನ್ಯಾಸಕ ಆದರ್ಶ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

















