ಬೆಂಗಳೂರು: ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಜಾಲವೊಂದನ್ನು ರಾಷ್ಟ್ರೀಯ ಮಾದಕ ದ್ರವ್ಯ ನಿಗ್ರಹ ದಳದ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದು, ಬಂಧಿತರಿಂದ ಬರೋಬ್ಬರಿ ₹ 25 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಆರ್.ಎಸ್. ರಂಜಿತ್, ಕೆ.ಕೆ. ಸಾರಂಗ್ ಹಾಗೂ ಪಿ.ಡಿ. ಅನೀಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೇರಳ ನೋಂದಣಿ ಸಂಖ್ಯೆ ಕಾರಿನಲ್ಲಿ ಆಂಧ್ರಪ್ರದೇಶದಿಂದ ಬೆಂಗಳೂರು ಹಾಗೂ ಕೇರಳಕ್ಕೆ ಡ್ರಗ್ಸ್ ಸಾಗಿಸುತ್ತಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಆಧಾರದ ಮೇಲೆ ದೇವನಹಳ್ಳಿ ಟೋಲ್‌ಗೇಟ್ ಬಳಿ ನ. 9ರಂದು ಕಾರು ತಡೆದು ತಪಾಸಣೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಗೆ ಅಂತರರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡಿದ್ದರು. ಶ್ರೀಲಂಕಾ ಹಾಗೂ ಮಾಲ್ಡೀವ್ಸ್ ಮೂಲಕ ಡ್ರಗ್ಸ್ ತರಿಸುತ್ತಿದ್ದರು ಎನ್ನಲಾಗಿದೆ.