Home » ಧಾರಾಕಾರ ಮಳೆ: ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ
ಧಾರಾಕಾರ ಮಳೆ: ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ
ಮಂಗಳೂರು:- ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.