ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಡೈನಾಮಿಕ್ ಪ್ರಿನ್ಸ್​ : ‘ಜಾತರ’ ಮಾಡಲು ಸಜ್ಜಾದ ಪ್ರಜ್ವಲ್ ದೇವರಾಜ್

2007ರಿಂದ ಸಿನಿಮಾ ವೃತ್ತಿ ಜೀವನ ಆರಂಭಿಸಿ, ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಬೇಡಿಕೆ ಹೊಂದಿರುವ ನಟ‌ ಪ್ರಜ್ವಲ್ ದೇವರಾಜ್.ನಟ ಪ್ರಜ್ವಲ್ ದೇವರಾಜ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 ಭಾಷೆಗಳಲ್ಲಿ ಜಾತರೆ ಸಿನಿಮಾ: ನಟ ಪ್ರಜ್ವಲ್ ದೇವರಾಜ್ ಇದೇ ಮೊದಲ ಬಾರಿಗೆ ಬಿಗ್ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿರುವ ಪ್ಯಾನ್ ಇಂಡಿಯಾ ಚಿತ್ರವೊಂದರಲ್ಲಿ ನಟಿಸಲು ಸಜ್ಜಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಸೇರಿ 5 ಭಾಷೆಗಳಲ್ಲಿ ಪ್ರಜ್ವಲ್ ದೇವರಾಜ್ ಅವರ ಮುಂದಿನ ಸಿನಿಮಾ ಮೂಡಿ ಬರಲಿದೆ
ಲವ್, ಆಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್ ಹೀಗೆ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆದ್ರೆ ಈವರೆಗೆ ದೊಡ್ಡ ಬ್ರೇಕ್​ ಕೊಡುವ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಕಾಣಿಸಿಕೊಂಡಿಲ್ಲ ಅನ್ನೋದು ಅಭಿಮಾನಿಗಳ ಬೇಸರ. ಸೂಪರ್​ ಡೂಪರ್​ ಹಿಟ್​ ಸಿನಿಮಾಗಾಗಿ ಅಭಿಮಾನಿ ಬಳಗ ಕಾದು ಕುಳಿತಿದೆ.
.
ಈ ಬಹುನಿರೀಕ್ಷಿತ ಚಿತ್ರದ ಹೆಸರು “ಜಾತರೆ”. ಆಯಕ್ಷನ್​, ಲವ್, ಫ್ಯಾಮಿಲಿ ಸೆಂಟಿಮೆಂಟ್ ಕಥಾಹಂದರ ಇರುವ ಈ ಚಿತ್ರದಲ್ಲಿ ಪ್ರಜ್ವಲ್ ಈವರೆಗೆ ನಿರ್ವಹಿಸಿರದ ಪಾತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಸಂಪೂರ್ಣ ವಿಭಿನ್ನ ಲುಕ್​ನಲ್ಲಿ ಪ್ರಜ್ವಲ್ ಕಾಣಿಸಿಕೊಳ್ಳಲಿದ್ದಾರೆ.
ಆಗಸ್ಟ್​ನಲ್ಲಿ ಶೂಟಿಂಗ್​​ ಶುರು, ಜನವರಿಯಲ್ಲಿ ತೆರೆಗೆ: ಇತ್ತೀಚೆಗೆ ಈ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನ ಸಹಕಾರ ನಗರದ ನಿರ್ಮಾಪಕರ ಕಚೇರಿಯಲ್ಲಿ ನಡೆಯಿತು.

ಉದಯ್ ನಂದನವನಂ ನಿರ್ದೇಶನದಲ್ಲಿ ಜಾತರೆ: ಈಗಾಗಲೇ ತೆಲುಗಿನಲ್ಲಿ ಹಲವಾರು ಯಶಸ್ವಿ ಚಿತ್ರಗಳನ್ನು ನಿರ್ದೇಶನ ಮಾಡಿರುವ ಉದಯ್ ನಂದನವನಂ ಅವರು ಈ ಚಿತ್ರಕ್ಕೆ ಆಯಕ್ಷನ್ ಕಟ್ ಹೇಳುತ್ತಿದ್ದಾರೆ. ಹೈದರಾಬಾದ್‌ ಮೂಲದ ಹೆಸರಾಂತ ವರ್ಧಮಾನ್ ಫಿಲಂಸ್ ಹಾಗೂ ಲೋಟಸ್ ಎಂಟರ್​ಟೈನ್​​ಮೆಂಟ್ಸ್ ಮೂಲಕ ಗೋವರ್ಧನ್ ರೆಡ್ಡಿ ಅವರು ಈ ಚಿತ್ರವನ್ನು ಅದ್ಧೂರಿ ವೆಚ್ಚದಲ್ಲಿ‌ ನಿರ್ಮಾಣ ಮಾಡುತ್ತಿದ್ದಾರೆ.

‘ಗಣ’ ಪ್ರಜ್ವಲ್​ ದೇವರಾಜ್​ ನಟಿಸುತ್ತಿರುವ ಮತ್ತೊಂದು ಸಿನಿಮಾ. ಇತ್ತೀಚೆಗಷ್ಟೇ ನಟನ ಫಸ್ಟ್ ಲುಕ್​ ಅನಾವರಣಗೊಂಡಿದೆ. ಪ್ರಜ್ವಲ್ ದೇವರಾಜ್ ಅವರಿಗೆ ಯಶಾ ಶಿವಕುಮಾರ್ ಜೋಡಿಯಾಗಿ ನಟಿಸಿದ್ದಾರೆ. ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್. ಪೇಟೆ, ರಮೇಶ್ ಭಟ್ ಸೇರಿ ಹಲವರು ಗಣ ತಾರಾಬಳಗದಲ್ಲಿದ್ದಾರೆ.
ಆಗಸ್ಟ್​ನಲ್ಲಿ ಚಿತ್ರದ ಶೂಟಿಂಗ್​​ ಪ್ರಾರಂಭಿಸಿ, ಬರುವ ಜನವರಿಯಲ್ಲಿ ಸಂಕ್ರಾಂತಿ ವೇಳೆಗೆ ಚಿತ್ರವನ್ನು ರಿಲೀಸ್ ಮಾಡುವ ಯೋಜನೆ ಚಿತ್ರತಂಡದ್ದು. ಭೀಮ್ಸ್ ಸೆಸಿರೋಲಿಯೋ ಅವರ ಸಂಗೀತ, ಸಾಯಿಶ್ರೀರಾಂ ಅವರ ಛಾಯಾಗ್ರಹಣ, ಬಿ.ವಾಸುದೇವರೆಡ್ಡಿ ಅವರ ಕಥೆ, ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿರಲಿದೆ. ಚಿತ್ರದ ನಾಯಕಿ, ಉಳಿದ ಪಾತ್ರವರ್ಗ ಹಾಗೂ ತಾಂತ್ರಿಕರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.