ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ಫಲಾನುಭವಿ ರೈತರು ಮೇ 31 ರ ಒಳಗೆ ಹತ್ತಿರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.