ಶೈಕ್ಷಣಿಕ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಪ.ವರ್ಗದ ಕೊರಗ ಸಮುದಾಯದ 10ನೇ ತರಗತಿ ಹಾಗೂ ಮೇಲ್ಪಟ್ಟ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಐಟಿಡಿಪಿ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಕುಂದಾಪುರ, ಕಾರ್ಕಳ ತಾಲೂಕು ಕಚೇರಿ ಹಾಗೂ ಎಲ್ಲ ಗ್ರಾಮ ಪಂಚಾಯತ್‌ಗಳಿoದ ಪಡೆಯಬಹುದು.

ಅರ್ಜಿ ಹಾಗೂ ಸಂಬoಧಿಸಿದ ದಾಖಲಾತಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು/ಕಾಲೇಜಿನ ಪ್ರಾಂಶುಪಾಲರಿoದ ಧೃಡೀಕರಿಸಿಕೊಂಡು ರಜತಾದ್ರಿಯಲ್ಲಿರುವ ಐಟಿಡಿಪಿ ಕಚೇರಿಗೆ ಸಲ್ಲಿಸುವಂತೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.