ಉಡುಪಿ: ವೃದ್ಧ ನಾಪತ್ತೆ

ಉಡುಪಿ: ನಗರದ ಎಂ.ಜಿ.ಎಂ ಕಾಲೇಜು ಕ್ಯಾಂಟೀನ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಕೆ.ವೀರಭದ್ರ ಶೆಟ್ಟಿಗಾರ್ (61) ಎಂಬ ವ್ಯಕ್ತಿಯು ಏಪ್ರಿಲ್ 8 ರಂದು ಪುಣ್ಯಕ್ಷೇತ್ರಗಳಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.