ಚುನಾವಣಾವಣಾಧಿಕಾರಿ ಹಾಗೂ ಸಿಬ್ಬಂದಿಗಳು ಮತದಾನಕ್ಕೆ ಅರ್ಜಿ ಸಲ್ಲಿಸಲು ಏ.13 ಕೊನೆಯ ದಿನ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ(Loksabha Elections) ಸಂಬಂಧಿಸಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರೆ ಅಧಿಕಾರಿಗಳು ಮತದಾನ ಮಾಡಲು ನಮೂನೆ- 12 ಹಾಗೂ ನಮೂನೆ -12 ಎ ಗಳನ್ನು ಸಲ್ಲಿಸಲು ಏಪ್ರಿಲ್ 13 ಕೊನೆಯ ದಿನ.

ನಿಗದಿತ ನಮೂನೆಯ ಅರ್ಜಿಗಳನ್ನು ಹಾಗೂ ಗುರುತಿನ ಚೀಟಿ ನಕಲು ಪ್ರತಿ, ನೇಮಕಾತಿ ಆದೇಶದ ನಕಲು ಪ್ರತಿಯೊಂದಿಗೆ ಸ್ಥಳೀಯ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.