ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಕೂಡಲೇ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಒಂದು ತಿಂಗಳೊಳಗೆ ಮೀಸಲಾತಿ ಅಧಿಸೂಚನೆಗೆ ಆದೇಶ ನೀಡಿದೆ.
198 ವಾರ್ಡ್ಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಅಲ್ಲದೆ, ಮೀಸಲಾತಿ ಅಧಿಸೂಚನೆ ಹೊರಡಿಸಿದ 6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆಯೋಗಕ್ಕೆ ನಿರ್ದೇಶನ ನೀಡಿದೆ. ಜೂನ್ 2020ರ ವಾರ್ಡ್ ಪುನರ್ವಿಂಗಡಣೆಯಂತೆ ಚುನಾವಣೆ ನಡೆಸಲು ಸೂಚನೆ ನೀಡಿದೆ.
ಕೆಎಂಸಿ ಕಾಯ್ದೆ ತಿದ್ದುಪಡಿ ಇದಕ್ಕೆ ಅನ್ವಯವಾಗಲ್ಲ. ಹಾಗಾಗಿ, ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆಯೋಗಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಮಾರ್ಚ್ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ.