ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ 5 ಗ್ಯಾರೆಂಟಿ ಜಾರಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಗ್ಯಾರಂಟಿ 1: ಯುವನಿಧಿ ಯೋಜನೆಯಡಿ 2022-23 ರಲ್ಲಿ ವ್ಯಾಸಂಗ ಮಾಡಿ ತೇರ್ಗಡೆ ಹೊಂದಿ ಹೆಸರು ನೋದಾಯಿಸಿಕೊಂಡ ಪಧವೀದರರಿಗೆ ಪ್ರತಿ ತಿಂಗಳೂ 3 ಸಾವಿರ ರೂ ಹಾಗೂ ಡಿಪ್ಲೋಮಾ ಆದವರಿಗೆ 1.500 ಸಾವಿರ ರೂ. 24 ತಿಂಗಳು(2 ವರ್ಷ)ಕಾಲ ಮಾತ್ರ. ಆದರೆ 2 ವರ್ಷದ ಒಳಗೆ ಅಭ್ಯರ್ಥಿಗೆ ಸರ್ಕಾರಿ ಆಥವಾ ಖಾಸಗಿ ಕಂಪನಿಯಲ್ಲಿ ಕೆಲಸ ಸಿಕ್ಕಿದಲ್ಲಿ ಯೋಜನೆ ಮೊಟಕುಗೊಳ್ಳುತ್ತದೆ. ಅಭ್ಯರ್ಥಿಗಳು ನಿರುದ್ಯೋಗಿಗಳು ಎಂದು ಘೋಷಿಸಿಕೊಂಡಿರಬೇಕು ಮತ್ತು ಯೋಜನೆಗೆ ಅರ್ಜಿಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ಯಾರಂಟಿ 2: ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಸಂಚಾರ. ಆದರೆ ಈ ಸಂಚಾರ ರಾಜ್ಯದ ಒಳಗೆ ಮಾತ್ರ ಸೀಮಿತ ಹಾಗೂ ಎಸಿ ಮತ್ತು ಲಕ್ಸುರಿ ಬಸ್ಗಳಿಗೆ ಅನ್ವಯಿಸುವುದಿಲ್ಲ. ಜೂನ್11ನೇ ತಾರೀಕಿನಿಂದ ಎಲ್ಲಾ ಮಹಿಳೆಯರೂ ಉಚಿತ ಸಂಚಾರ ಕೈಗೊಳ್ಳಬಹುದು.
ಗ್ಯಾರಂಟಿ 3: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ. ಇದಕ್ಕಾಗಿ ಮಹಿಳೆಯರು ಜೂನ್ 15 ರಿಂದ ಜುಲೈ 15 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಮನೆ ಯಜಮಾನಿಯಾದವರು ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರದ ಜೆರಾಕ್ಸ್ ಪ್ರತಿ ನೀಡಬೇಕು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಅನ್ವಯ.
ಗ್ಯಾರಂಟಿ 4: ಗೃಹಜ್ಯೋತಿ ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. 200 ಯುನಿಟ್ ಒಳಗಡೆ ವಿದ್ಯುತ್ ಬಳಸುವವರು ಬಿಲ್ ಕಟ್ಟಬೇಕಾಗಿಲ್ಲ. ಯಾರು ಎಷ್ಟು ವಿದ್ಯುತ್ ಬಳಸುತ್ತಾರೋ ಅವರ ಬಿಲ್ಲಿನ 12 ತಿಂಗಳ ಸರಾಸರಿ ತೆಗೆದುಕೊಳ್ಳಲಾಗುವುದು. 12 ತಿಂಗಳಲ್ಲಿ ಬಳಸಿದ ವಿದ್ಯುತ್ ಬಳಕೆಯ ಸರಾಸರಿ ಲೆಕ್ಕಹಾಕಿ ಬಿಲ್ ನ ಮೇಲೆ 10% ವರೆಗೆ ಪಾವತಿ ವಿನಾಯತಿ.
ಗ್ಯಾರಂಟಿ 5: ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.