ಕಾರ್ಕಳ: ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಒಂದು ದಿನದ ಇಂಗ್ಲಿಷ್ ಭಾಷಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಹಾಗೂ ಇಂಗ್ಲಿಷ್ ಭಾಷಾ ಉಪನ್ಯಾಸಕ ಅಬ್ದುಲ್ ಸಮಾದ್ ನೆಕ್ಕಾರೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ, ನಮ್ಮ ಜೀವನದಲ್ಲಿ ಇಂಗ್ಲಿಷ್ ಭಾಷೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಜೊತೆಗೆ ಹೊಸ ಇಂಗ್ಲಿಷ್ ಪದಗಳನ್ನು ಬಳಸಿ ವಾಕ್ಯ ರಚಿಸುವ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ದಿನೇಶ್ ಎಮ್ ಕೊಡವೂರು, ನ್ಯೂಸ್ ಕಾರ್ಕಳದ ರಾಮಚಂದ್ರ ಪರಪ್ಪಾಡಿ , ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಉಷಾ ರಾವ್ ಯು, ಕಾಲೇಜಿನ ಉಪನ್ಯಾಸಕರು, ಪ್ರೌಢ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
ಶಾಲೆಯ ಶಿಕ್ಷಕಿ ಶ್ರೀಮತಿ ಸ್ವಾತಿ ಪ್ರಾರ್ಥಿಸಿ, ಇಂಗ್ಲಿಷ್ ಶಿಕ್ಷಕಿ ಪವಿತ್ರಾ ಎನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.