ಉಡುಪಿ: ಉಸಿರು ನಿಂತರೂ ಹೆಸರು ಉಳಿಸುವ ಕಾರ್ಯಕ್ರಮವನ್ನು ತುಳುಕೂಟವು ನಿರಂತರವಾಗಿ ಮಾಡುತ್ತಿದೆ. ಒಳ್ಳೆ ಕೆಲಸ ಮಾಡಿದವರ ಹೆಸರು ಅಜರಾಮರವಾಗಿರಬೇಕು. ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸಿದಲ್ಲಿ ಹತ್ತು ವರ್ಷದ ಬಳಿಕ ತುಳು ಕೋಟಾದಲ್ಲಿ ಸೀಟು ಸಿಗುವುದು ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಅವರು ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ಆಯೋಜಿಸಿದ್ದ ತುಳು ಭಾವಗೀತೆ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾವಗೀತೆಯಲ್ಲಿ ಭಾವನಾತ್ಮಕ ಸಂಬಂಧವಿದೆ. ತಂತಜ್ಞಾನದೊಂದಿಗೆ ನಮ್ಮತನವನ್ನು ಬಿಟ್ಟುಕೊಡಬಾರದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆಯ ನಿರ್ದೇಶಕಿ ಪೂರ್ಣಿಮಾ ಅಭಿಪ್ರಾಯಪಟ್ಟರು.
ಸುಗಮ ಸಂಗೀತ ಕಲಾವಿದ ಬಿ. ಕೆ. ಕಾರಂತ್ ಜ್ಯೋತಿ ಬೆಳಗಿಸಿ ಭಾವಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಾಲಪ್ರತಿಭೆ ರೀತುಶ್ರೀ ಯವರನ್ನು ಅಭಿನಂದಿಸಲಾಯಿತು.
ಕಾರ್ಯದರ್ಶಿ ಗಂಗಾಧರ್ ಕಿದಿಯೂರು, ಮನೋರಮಾ ಶೆಟ್ಟಿ, ಭುವನ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.
ತುಳು ಭಾವಗೀತೆ ಸ್ಪರ್ಧೆಯ ಸಂಚಾಲಕ ಜಯರಾಂ ಸ್ವಾಗತಿಸಿ, ಪ್ರಸ್ತಾವಿಸಿದರು. ವಿದ್ಯಾ ಸರಸ್ವತಿ ನಿರೂಪಿಸಿದರು.
ಪ್ರಭಾಕರ್ ಭಂಡಾರಿ ವಂದಿಸಿದರು.