ವಸತಿ ಶಾಲೆಗಳ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯು ಮಾರ್ಚ್ 20 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ಕುಂದಾಪುರ, ಕಾರ್ಕಳ, ಕಾಪು ಹಾಗೂ ಉಡುಪಿಯಲ್ಲಿ ನಡೆಯಲಿದೆ.

ಪರೀಕ್ಷೆ ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.