ಉಡುಪಿ: ಜನವರಿ 2023 ನೇ ಸಾಲಿಗಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8 ತರಗತಿಗೆ ಪ್ರವೇಶ ಬಯಸುವ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪರೀಕ್ಷೆಯನ್ನು ಬೆಂಗಳೂರು ಕೆಂದ್ರದಲ್ಲಿ ಜೂನ್ 4 ರಂದು ನಡೆಸಲಾಗುವುದು.
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ 2023 ಜನವರಿ 1 ಕ್ಕೆ 11.5 ಯಿಂದ 13 ವರ್ಷದೊಳಗಿರುವ ಬಾಲಕ ಹಾಗೂ ಬಾಲಕಿಯರು ಮಾತ್ರ ಪರೀಕ್ಷೆಗೆ ಅರ್ಹರಿರುತ್ತಾರೆ.
ಅರ್ಜಿ ನಮೂನೆಗಳನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಅಥವಾ ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು 555 ರೂ. ಗಳನ್ನು ಆನ್‌ಲೈನ್ ಮೂಲಕ www.rimc.gov.in ನಲ್ಲಿ ಪಾವತಿಸಿ, ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು ಇವರಿಗೆ ಏಪ್ರಿಲ್ 25 ರ ಒಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-25589459 ಅಥವಾ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.