ಬ್ರಹ್ಮಾವರ: ಪರಿಸರ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿತೆ ಮತ್ತು ತರಬೇತಿ ಕಾರ್ಯಕ್ರಮವನ್ನು ಲಲಿತಕಲಾ ಸಂಘದ ವತಿಯಿಂದ ಏ. 3 ರಂದು ಸೈಂಟ್ ಮೇರಿಸ್ ಕಾಲೇಜಿನಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಯಪ್ರಕಾಶ್ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಮತ್ತು ಅದರ ಪ್ರಾಮುಖ್ಯತೆಯ ಕುರಿತು ವಿವರಿಸಿ ಪ್ಲಾಸ್ಟಿಕ್ ಬದಲಿಗೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ ಪರಿಸರವನ್ನು ಸಂರಕ್ಷಣೆ ಮಾಡುವುದರ ಬಗ್ಗೆ ಅರಿವು ಮೂಡಿಸಿದರು ಮತ್ತು ಪೇಪರ್ ನಿಂದ ಪೆನ್ನನ್ನು ತಯಾರಿಸುವುದರ ಬಗ್ಗೆ ತರಬೇತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಉಡುಪ ಕೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ್ ಹಾಗೂ ಜಯಶ್ರೀ ಅವರು ಉಪಸ್ಥಿತರಿದ್ದರು.
ಲಲಿತ ಕಲಾ ಸಂಘದ ಅಧ್ಯಾಪಕ ಸಲಹೆಗಾರ್ತಿ ಶ್ರೀಮತಿ ಆಶಾ ಟಿ ಕೆ ಸ್ವಾಗತಿಸಿದರು.