ಕಟಪಾಡಿ: ಜೂನ್ 5 ರಂದು ಇಲ್ಲಿನ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾಲೇಜಿನ ಸಿಬ್ಬಂದಿ ಶಶಿಕಿರಣ್ ಆಚಾರ್ಯ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿಯ ಅರಿವು ಮೂಡಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕುರಿತಾದ ಬೀದಿ ನಾಟಕವನ್ನು ಪ್ರದರ್ಶಿಸಿ ಮಕ್ಕಳಿಗೆ ಪರಿಸರ ರಕ್ಷಣೆ ಮಹತ್ವ ತಿಳಿಸಿದರು.
ತ್ರಿಶಾ ಸಂಸ್ಥೆಯ ಅಧ್ಯಕ್ಷ ಸಿ.ಎ ಗೋಪಾಲಕೃಷ್ಣ ಭಟ್ ಹಾಗೂ ಪ್ರಾಧ್ಯಾಪಕರಿಗೆ ಗಿಡವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜು ಹಾಗು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು.
ಜೂನ್ 6 ರಂದು ತೃತೀಯ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳು ಹಾಗು ಪ್ರೇರೇಪಣೆಯ ಕುರಿತಾದ ಕಾರ್ಯಾಗಾರವು ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಹೆಸರಾಂತ ಮೋಟಿವೇಷನಲ್ ಸ್ಪೀಕರ್ ಹಾಗೂ ಲೈಫ್ ಕೋಚ್ ಪ್ರವೀಣ್ ಗುಡಿ ಅವರಿಂದ ಜರುಗಿತು. ವಿದ್ಯಾರ್ಥಿಗಳು ಜೀವನಕ್ಕೆ ಅಗತ್ಯವಿರುವ ಮೌಲ್ಯಗಳನ್ನು ಪ್ರಾಯೋಗಿಕ ಉದಾಹರಣೆಗಳ ಮೂಲಕ ತಿಳಿದುಕೊಂಡರು ಹಾಗು ತಮ್ಮ ಜೀವನದಲ್ಲಿ ಏನಾದರು ಸಾಧಿಸಬೇಕು ಎನ್ನುವ ಸಂದೇಶ ಪಡೆದುಕೊಂಡರು.
ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೋ। ಗುರುಪ್ರಸಾದ್ ರಾವ್ ಸ್ವಾಗತಿಸಿ, ತ್ರಿಶಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೋ। ಇಂದುರೀತಿ ವಂದಿಸಿದರು.