ಉಡುಪಿ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಉಡುಪಿಯು 2019 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂನ್ 1 ರಂದು ಬೆಳಗ್ಗೆ 10 ಕ್ಕೆ ಉಡುಪಿ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾಯು ಮಾಲಿನ್ಯ ತಡೆಗಟ್ಟುವ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿರುತ್ತದೆ.
ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಪ್ರಾಥಮಿಕ ಶಾಲಾ ವಿಭಾಗದಲ್ಲಿ 1 ರಿಂದ 4 ನೇ ತರಗತಿವರೆಗೆ ಹಾಗೂ 5 ರಿಂದ 7 ನೇ ತರಗತಿವರೆಗೆ, ಪ್ರೌಢಶಾಲಾ ವಿಭಾಗದಲ್ಲಿ 8 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪರಿಸರ ಅಧಿಕಾರಿ ಪ್ರಮೀಳಾ, ಮೊ.ನಂ: 9901226279 ಅನ್ನು ಸಂಪರ್ಕಿಸುವಂತೆ ಪರಿಸರ ಅಧಿಕಾರಿ ಡಾ. ಹೆಚ್. ಲಕ್ಷ್ಮೀಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












