ವಿಶ್ವ ಪರಿಸರ ದಿನಾಚರಣೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸAಸ್ಥೆಯಾಗಿದ್ದು, ವಿಶ್ವ ಪರಿಸರ ದಿನಾಚರಣೆ-2024 ರ ಅಂಗವಾಗಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿರುತ್ತದೆ.
ಕನ್ನಡ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ 1000 ಪದಗಳಿಗೆ ಮೀರದಂತೆ ಪ್ರಬಂದವನ್ನು ಬರೆದು, ಮೇ 27 ರ ಒಳಗಾಗಿ ಇ-ಮೇಲ್‌ನಲ್ಲಿ ಪಿಡಿಎಫ್ ಮೂಲಕ essay.ksta@gmail.com ಗೆ ಅಥವಾ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ,
ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನ ಕಾಲೇಜು ಪ್ರವೇಶ ದ್ವಾರದ ಬಳಿ, ವಿದ್ಯಾರಣ್ಯಪುರ ಪೋಸ್ಟ್, ಯಲಹಂಕ, ಬೆಂಗಳೂರು ಇಲ್ಲಿಗೆ ಪೋಸ್ಟ್ ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.kstacademy.in ಹಾಗೂ ಮೊ. 9008675123 ಅನ್ನು ಸಂಪರ್ಕಿಸಬಹುದಾಗಿದೆ.