ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರವು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚಿಸಿದ್ದು, ಈ ಟ್ರಸ್ಟ್ ನಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ಟ್ರಸ್ಟ್ ಗೆ ದಕ್ಷಿಣ ಭಾರತದಿಂದ ಪೇಜಾವರ ಶ್ರೀ ಹಾಗೂ ತಮಿಳುನಾಡಿನಿಂದ ಯುಗಪುರುಷ್ ಪರಮಾನಂದ್ ಸರಸ್ವತಿ ಸೇರಿದಂತೆ 9 ಮಂದಿಯನ್ನು ನೇಮಕ ಮಾಡಲಾಗಿದೆ. ಹಾಗೆಯೇ ಟ್ರಸ್ಟ್ ನಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ಶಾಶ್ವತ ಸ್ಥಾನ ಕಲ್ಪಿಸಲಾಗಿದೆ.
ಟ್ರಸ್ಟ್ ರಚನೆ ಕುರಿತು ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದ್ದು, ಟ್ರಸ್ಟ್ ರಚನೆಗೊಂಡ ಬಳಿಕ ಭೂಮಿಯನ್ನು ಟ್ರಸ್ಟ್ ಗೆ ನೀಡಲಾಗುತ್ತದೆ ಎಂಬ ಮಾಹಿತಿ ಹೊರಬಿದ್ದಿದೆ.