ವಿದ್ಯುತ್ ಬಿಲ್ ಬಾಕಿ ಇದ್ದರೂ ಸಿಗಲಿದೆ ಗೃಹಜ್ಯೋತಿ ಪ್ರಯೋಜನ..!

ಬೆಂಗಳೂರು: ಸರಕಾರದ ಗೃಹಜ್ಯೋತಿ ವಿದ್ಯುತ್ ಬಿಲ್ ಬಾಕಿ ಇದ್ದರವರಿಗೂ ಕೂಡ ಈ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಇಲಾಖೆ ವಿಶೇಷ ಪ್ರಕಟಣೆಯಲ್ಲಿ ತಿಳಿಸಿದೆ.

200 ಯೂನಿಟ್ ಮೀರದೆ, ವಿದ್ಯುತ್ ಬಿಲ್‌ ಬಾಕಿ ಉಳಿಸಿಕೊಂಡಿರುವ ಎಲ್ಲಾ ಗ್ರಾಹಕರಿಗೆ ಗೃಹ ಜ್ಯೋತಿ ಯೋಜನೆ ಪ್ರಯೋಜನ ಸಿಗಲಿದೆ.

ಹಿಂದಿನ ಬಾಕಿಯನ್ನು ಸೆಪ್ಟೆಂಬರ್ 30ರ ಒಳಗೆ ಪಾವತಿಸಬೇಕು. ಮೂರು ತಿಂಗಳು ಕಾಲಾವಕಾಶ ಇದೆ ಎಂದು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಈ ತಿಂಗಳ ಜುಲೈ 25ರೊಳಗೆ ಯೋಜನೆಗೆ ನೋಂದಾಯಿಸಿಕೊಂಡರೆ ಆಗಸ್ಟ್ ತಿಂಗಳ ಬಿಲ್‌ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ.

ಬಿಲ್ಲಿಂಗ್ ಅವಧಿ ಪ್ರತಿ ತಿಂಗಳ 25ನೇ ದಿನಾಂಕದಿಂದ ಮುಂದಿನ ತಿಂಗಳ 25 ನೇ ದಿನಾಂಕದವರೆಗೆ ಇರುತ್ತದೆ.