ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ 3ನೇ ಹಂತದ ಮತದಾನ ನಡೆಯುತ್ತಿದ್ದು, ಈ ಮಧ್ಯೆ ತೃಣಮೂಲ ಕಾಂಗ್ರೆಸ್ ನಾಯಕನ ಮನೆಯಲ್ಲಿ ಇವಿಎಂ ಪತ್ತೆಯಾಗಿರುವುದು ಬಹಳಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಹೌರಾ ಜಿಲ್ಲೆಯ ಉತ್ತರ ಉಲುಬೇರಿಯಾದಲ್ಲಿ ಗೌತಮ್ ಘೋಷ್ ಎಂಬ ಟಿಎಂಸಿ ನಾಯಕನ ಮನೆಯಲ್ಲಿ ನಾಲ್ಕು ಇವಿಎಂ, ವಿವಿಪಿಎಟಿ ಗಳು ಪತ್ತೆಯಾಗಿದೆ. ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘನೆ ಮಾಡಿರುವುದಕ್ಕೆ ಆಯೋಗದ ಅಧಿಕಾರಿ ತಪನ್ ಸರ್ಕಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಅಧಿಕಾರಿ ತಪನ್ ಸರ್ಕಾರ್ ಟಿಎಂಸಿ ನಾಯಕ ಗೌತಮ್ ಘೋಷ್ ಮನೆಯಲ್ಲಿ ಮಲಗಿದ್ದನು. ಅಲ್ಲದೆ, ಇವಿಎಂ, ವಿವಿಪಿಎಟಿ ಗಳನ್ನು ತನ್ನ ಬಳಿ ಇರಿಸಿಕೊಂಡಿದ್ದನು. ಅಧಿಕಾರಿ ತನ್ನ ಬಳಿ ಇರಿಸಿಕೊಂಡಿದ್ದ ಇವಿಎಂ ನ್ನು ಚುನಾವಣಾ ಪ್ರಕ್ರಿಯೆಯಿಂದ ತೆಗೆದುಹಾಕಲಾಗಿದೆ, ಚುನಾವಣೆಗೆ ಬಳಕೆ ಮಾಡುವುದಿಲ್ಲ ಎಂದೂ ಆಯೋಗ ಸ್ಪಷ್ಟನೆ ನೀಡಲಾಗಿದೆ.