ಉಡುಪಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ತಮ್ಮ ಕುಟುಂಬ ಸಮೇತರಾಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಪಡೆದುಕೊಂಡರು.ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.