ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ತಮ್ಮ ದೂರದರ್ಶಿ ಕಾರ್ಯಕ್ರಮಗಳ ಮೂಲಕ ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಯಶಸ್ಸಿನಲ್ಲಿ ಪ್ರಮಖ ಪಾತ್ರ ವಹಿಸಿದ್ದ ಡಾ.ಬಿ.ಯಶೋವರ್ಮ ದೀರ್ಘಕಾಲದ ಅನಾರೋಗ್ಯದಿಂದಾಗಿ ಸೋಮವಾರ ನಿಧನರಾಗಿದ್ದಾರೆ.
ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.
ಕಳೆದ ಕೆಲವು ತಿಂಗಳಿನಿಂದ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 66 ವರ್ಷದ ಯಶೋವರ್ಮ ಅವರು ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಡಾ. ಬಿ.ಯಶೋವರ್ಮ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಬಂಧುವರ್ಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.