ಕುಂದಾಪುರ: ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪುರ: ನಾಡು ನುಡಿಯ ಬಗ್ಗೆ ಅಭಿಮಾನ ಮತ್ತು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸಿದ ‘ಕೋಟಿ ಕಂಠ ಗೀತಗಾಯನ’ ಕಾರ್ಯಕ್ರಮವನ್ನು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಂಶುಪಾಲರನ್ನು ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿಸಲಾಯಿತು.

ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸಿ ಶಿಸ್ತು ಬದ್ಧವಾಗಿ ಸರ್ಕಾರವು ನಿಗದಿಪಡಿಸಿದ ಜಯಭಾರತ ಜನನಿಯ ತನುಜಾತೆ, ಉದಯವಾಗಲಿ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಂಡಿಮವ, ಹಚ್ಚೇವು ಕನ್ನಡದ ದೀಪ , ವಿಶ್ವವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ಎನ್ನುವ ಹಾಡುಗಳನ್ನು ಹಿನ್ನೆಲೆ ಸಂಗೀತದೊಂದಿಗೆ ಹಾಡಿದರು.

ಈ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜ್ಞಾನ್ ಎಜುಕೇಶನಲ್ ಟ್ರಸ್ಟಿನ ಅಧ್ಯಕ್ಷ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಶೆಟ್ಟಿಯವರು ವಹಿಸಿದ್ದರು. ವೇದಿಕೆಯಲ್ಲಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟಿನ ಖಜಾಂಚಿ ಭರತ್ ಶೆಟ್ಟಿ , ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸುರೇಖಾ ಆಚಾರ್ಯ ಉಪಸ್ಥಿತರಿದ್ದರು.

ಕನ್ನಡ ಶಿಕ್ಷಕ ಶರತ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಶಾಲೆ ಮತ್ತು ಕಾಲೇಜಿನ ಶಿಕ್ಷಕ, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.