ಅಬಕಾರಿ ಅಕ್ರಮ: ಕಂಟ್ರೋಲ್ ರೂಮ್’ಗೆ ದೂರು ನೀಡಲು ಕರೆ

ಮಂಗಳೂರು: 2023ನೇ ಸಾಲಿನಲ್ಲಿ ರಾಜ್ಯ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಅಕ್ರಮ ಮಧ್ಯ, ಬೀರ್ ತಯಾರಿಕೆ, ದಾಸ್ತಾನು ಹಾಗೂ ಸಾಗಾಣಿಕೆ ಬಗ್ಗೆ ಸಾರ್ವಜನಿಕರಿಂದ ನೀಡಲಾಗುವ ದೂರುಗಳನ್ನು ಸ್ವೀಕರಿಸಲು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಬಕಾರಿ ಇಲಾಖೆಯ ಜಿಲ್ಲಾ ಕೇಂದ್ರ ಕಚೇರಿಯಲ್ಲಿ, ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಗಳನ್ನು ತೆರೆಯಲಾಗಿದೆ.

ಈ ಕಂಟ್ರೋಲ್ ರೂಮ್’ಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಅಬಕಾರಿ ಅಕ್ರಮಗಳ ಬಗ್ಗೆ ಮಾಹಿತಿಯನ್ನು ಕಂಟ್ರೋಲ್ ರೂಂ. ಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.

ನಗರದ ಮೇರಿಹಿಲ್ನಲ್ಲಿರುವ ಅಬಕಾರಿ ಉಪ ಆಯುಕ್ತರ ಕಚೇರಿ ಟೋಲ್ ಫ್ರೀ ಸಂಖ್ಯೆ 1800 -4253872, ದೂ.ಸಂಖ್ಯೆ:0824 – 2213872. ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08255-232726, ಬೆಳ್ತಂಗಡಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08256-298757, ಪುತ್ತೂರು ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08251-238481, ಸುಳ್ಯ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08257-231309 ಅನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.