ಉಡುಪಿ: ಇಲ್ಲಿನ ಪುತ್ತೂರು ಗ್ರಾಮದ ವಾಸುಕಿ ನಗರದ ಗಣೇಶ್ ನಾಯಕ್ ಎಂಬುವವರ ಮನೆಗೆ ಖಚಿತ ಮಾಹಿತಿ ಆಧಾರದ ಮೇಲೆ ಇಂದು ದಾಳಿ ನಡೆಸಿದ ಅಬಕಾರಿ ಪೊಲೀಸರು, ಮನೆಯಲ್ಲಿ ಅಕ್ರಮವಾಗಿ ಕೂಡಿಟ್ಟ 150 ಗ್ರಾಂ ಗಾಂಜಾ ಹಾಗೂ ಗೋವಾ ರಾಜ್ಯದ 12 ಲೀ. ಬ್ಲೂ ವಿಸ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಗಣೇಶ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದೆ ಎಂದು ಅಬಕಾರಿ ಪೊಲೀಸರು ತಿಳಿಸಿದ್ದಾರೆ.