ಹಡಿಲು ಭೂಮಿ‌ ಕೃಷಿ ಅಭಿಯಾನ ರಾಜ್ಯಕ್ಕೆ ವಿಸ್ತರಣೆಯಾಗಲಿ: ಕೃಷಿ ಸಚಿವ ಬಿ.ಸಿ. ಪಾಟೀಲ್

ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ಹಡಿಲು ಭೂಮಿ ಕೃಷಿ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿದಲ್ಲಿ, ರಾಜ್ಯದಲ್ಲಿ ಹಡಿಲು ಬಿದ್ದಿರುವ 15 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯನ್ನು ಹಸನಾಗಿಸಬಹುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಕೇದಾರೋತ್ಥಾನ ಟ್ರಸ್ಟ್‌ನಿಂದ ಕಡೆಕಾರಿನಲ್ಲಿ ಶನಿವಾರ ನಡೆದ ಹಡಿಲು ಭೂಮಿ ಕೃಷಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. , ಶಾಸಕ ರಘುಪತಿ‌ ಭಟ್ ಕೃಷಿ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ. ಅವರ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್‌ ವತಿಯಿಂದ ಜಿಲ್ಲೆಯಲ್ಲಿ ಹಡಿಲು ಬಿದ್ದಿದ್ದ 2,000 ಎಕರೆಯಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತದ ನಾಟಿ ನಡೆಯುತ್ತಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಟ್ರಸ್ಟ್ ಮಾಡುತ್ತಿರುವುದು ಅಭಿನಂದನೀಯ ಎಂದರು.