ಮಂಗಳೂರು: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅರ್ಹತೆ ಪಡೆದು ಮುಂದಿನ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.
ಮೈಸೂರಿನ ಅರ್ಜುನ್ ಕಿಶೋರ್ ಮತ್ತು ಬೆಂಗಳೂರಿನ ಸವ್ಯಸಾಚಿ ಎಸ್. ಆಯ್ಕೆಯಾಗಿದ್ದಾರೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2023ರ ಸೆಪ್ಟೆಂಬರ್ 3 ರಂದು ಪರೀಕ್ಷೆ ನಡೆಸಿತ್ತು.