ಮಂಗಳೂರು: ಕೊಡಿಯಾಲ್ಬೈಲ್ ನಲ್ಲಿರುವ ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ನವೀಕೃತ ಕಚೇರಿಯನ್ನು ಮಂಗಳೂರಿನ ಖ್ಯಾತ ನೇತ್ರ ತಜ್ಞ ಡಾ.ವಿಷ್ಣುಪ್ರಭು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯು ಕಳೆದ ಕೆಲವು ದಶಕಗಳಿಂದ ಉತ್ತಮ ಗುಣಮಟ್ಟದ ಮೌಲ್ಯಾತ್ಮಕ ಶಿಕ್ಷಣವನ್ನು ಕೊಡುವಲ್ಲಿ ಅಪಾರವಾದ ಪರಿಶ್ರಮ ಪಟ್ಟಿದೆ ಎಂದ ಅವರು, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ. ಎಲ್. ನಾಯಕ್ ಹಾಗೂ ಉಪಾಧ್ಯಕ್ಷೆ ಡಾ.ಉಷಾಪ್ರಭಾ ನಾಯಕ್ ರವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ. ಎಲ್. ನಾಯಕ್, ಉಪಾಧ್ಯಕ್ಷೆ ಡಾ. ಉಷಾಪ್ರಭಾ ನಾಯಕ್, ವಾಸ್ತುಶಿಲ್ಪ ತಜ್ಞೆ ದೀಪಿಕಾ ಎ ನಾಯಕ್, ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಮಚಂದ್ರ ಭಟ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.