ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಎನ್ ಕೌಂಟರ್ ಸ್ಪೆಷಲಿಸ್ಟ್ ಪೊಲೀಸ್ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಬಂಧಿಸಿದೆ.
ಸತತ 12 ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದ ಬಳಿಕ ಸಚಿನ್ ವಾಜೆ ಅವರನ್ನು ಸುಮಾರು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಫೆ. 25ರಂದು ಮುಕೇಶ್ ಅಂಬಾನಿ ನಿವಾಸದ ಮುಂದೆ ಸ್ಕಾರ್ಪಿಯೋ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು ಮತ್ತು ಬೆದರಿಕೆ ಪತ್ರಗಳು ದೊರೆತಿದ್ದವು. ಈ ಮೊದಲು ಪ್ರಕರಣದ ತನಿಖೆಯನ್ನು ಸಚಿನ್ ವಾಜೆ ಅವರಿಗೆ ವಹಿಸಲಾಗಿತ್ತು. ನಂತರ ಎನ್ ಐಎ ಗೆ ಕೇಸು ಹಸ್ತಾಂತರವಾಗಿತ್ತು. ಸ್ಫೋಟಕಗಳು ತುಂಬಿದ್ದ ಕಾರನ್ನು ಫೆ. 25ರಂದು ಅಂಬಾನಿ ನಿವಾಸದ ಮುಂದೆ ತಂದಿಡುವಲ್ಲಿ ಸಚಿನ್ ವಾಜೆ ಅವರ ಪಾತ್ರವಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.












