ಕೊಡವೂರು: ವಾರ್ಡಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ನಡೆಯಿತು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು.
ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ವತಿಯಿಂದ ಉಚಿತವಾಗಿ ನೇತ್ರ ತಪಾಸಣಾ ಶಿಬಿರವನ್ನು ಕೊಡವೂರು ವಾರ್ಡಿನ ಲಕ್ಷ್ಮೀ ನಗರ ಪರಿಸರದಲ್ಲಿ ಆಯೋಜಿಸಲಾಗಿದೆ, ಸರಕಾರದ ಪ್ರತಿಯೊಂದು ಯೋಜನೆಯು ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕು. ಇಂತಹ ಶಿಬಿರದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಸವಲತ್ತುಗಳನ್ನು ಪ್ರತಿ ಮನೆಗೆ ತಲುಪಿಸಲು ಸಾಧ್ಯವಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸವಲತ್ತುಗಳನ್ನು ಕೊಡವೂರಿನ ಕಾರ್ಯಕರ್ತರ ಸಹಾಯದಿಂದ ಎಲ್ಲಾ ಮನೆಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ತ್ಯ ಕಾರ್ಯಕ್ರಮದ ಪ್ರಮುಖರಾದ ಡಾ.ಸುಪ್ರೀತಾ, ಡಾ.ಸ್ಮಿತಿ ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ, ಪ್ರೈಮರಿ ಆರೋಗ್ಯ ಕಾರ್ಯಕರ್ತೆ ಸವಿತಾ ಡಿ. ಹಾಜರಿದ್ದರು.
ಹಿಮ ಸ್ವಾಗತಿಸಿ, ವಂದಿಸಿದರು.