ಫೇಸ್‌ಬುಕ್‌ನ ಮಾತೃಸಂಸ್ಥೆಯ ಹೆಸರು ಬದಲಾವಣೆ..!

ವಾಷಿಂಗ್ಟನ್‌: ಫೇಸ್‌ಬುಕ್‌ನ ಮಾತೃಸಂಸ್ಥೆಯ ಹೆಸರು ‘ಮೆಟಾ’ ಎಂದು ಬದಲಾಗಲಿದೆ. ಫೇಸ್‌ಬುಕ್ ತನ್ನ ಹೆಸರನ್ನು ಸಾಮಾಜಿಕ ಮಾಧ್ಯಮದಿಂದ ದೂರವಿಟ್ಟು ‘ಮೆಟಾವರ್ಸ್’ ಅನ್ನು ಅಭಿವೃದ್ಧಿಪಡಿಸುವ ಕಡೆಗೆ ಗಮನಹರಿಸುವ ನಿಟ್ಟಿನಲ್ಲಿ ಹೆಸರನ್ನು ಬದಲಾಯಿಸಲಾಗಿದೆ ಎನ್ನಲಾಗಿದೆ.

ಫೇಸ್‌ಬುಕ್‌ ಜಾಲತಾಣದ ಮುಖ್ಯಸ್ಥ ಮಾರ್ಕ್‌ ಜ್ಯುಕರ್‌ಬರ್ಗ್‌ ಈ ವಿಷಯ ಪ್ರಕಟಿಸಿದ್ದು, ‘ಮೆಟಾ’ ಸಾಮಾಜಿಕ ಜಾಲತಾಣವನ್ನು ಇನ್ನೊಂದು ಹಂತಕ್ಕೆ ಒಯ್ಯಲಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ವಿಷಯಗಳ ಜೊತೆಗಿನ ಜಂಜಾಟಗಳಿಂದ ಸಾಕಷ್ಟು ಕಲಿತಿದ್ದೇವೆ. ನಾವು ಕಲಿತಿದ್ದು ಹೊಸ ಅಧ್ಯಾಯ ರೂಪಿಸಲು ನೆರವಾಗಲಿದೆ ಎಂದು ಅವರು ಡೆವಲಪರ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಹೇಳಿದರು.

ಆದರೆ, ನಮ್ಮ ಅಪ್ಲಿಕೇಷನ್‌ಗಳು ಹಾಗೂ ಅವರು ಬ್ರಾಂಡ್‌ಗಳು ಬದಲಾಗುತ್ತಿಲ್ಲ ಎಂದು ತಿಳಿಸಿದರು.