ಎಸ್.ಎಮ್ ಎಸ್ ಕಾಲೇಜಿನ ಪ್ರಾಧ್ಯಾಪಕರಿಗಾಗಿ ಪುನಶ್ಚೇತನ ಕಾರ್ಯಾಗಾರ

ಬ್ರಹ್ಮಾವರ: ಎಸ್.ಎಮ್ ಎಸ್ ಕಾಲೇಜಿನ ಪ್ರಾಧ್ಯಾಪಕ ವೃಂದದವರ ಪುನಶ್ಚೇತನ ಕಾರ್ಯಾಗಾರವು ಕಾಲೇಜಿನ ಕಿರು ಸಭಾಂಗಣದಲ್ಲಿ ಜರುಗಿತು.

ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನ್ಯಾಕ್ ಸಂಯೋಜಕ ಪ್ರೊ. ವಿನಾಯಕ್ ಪೈ ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಾಗುತ್ತಿರುವ ಸಕಾರಾತ್ಮಕ ಬದಲಾವಣೆಗಳನ್ನು ಹಾಗೂ ಪ್ರಾಧ್ಯಾಪಕರಿಗಿರುವ ಸವಾಲುಗಳನ್ನು ಉಲ್ಲೇಖಿಸುತ್ತಾ, ಪ್ರಾಧ್ಯಾಪಕರು ನ್ಯಾಕ್ ಮಾನದಂಡಗಳನುಸಾರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ತಮ್ಮ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವ ಕುರಿತು ಮಾರ್ಗದರ್ಶನ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಉಡುಪ, ಶಿಕ್ಷಕ ಶಿಕ್ಷಕೇತರ ವೃಂದದವರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.