ಬಿಹಾರ ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನ

ಪಾಟ್ನಾ: ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ನೂತನ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರದ ಸಂಪುಟ ರಚನೆಯಾಗಿ ಒಂದು ವಾರ ಕೂಡ ಕಳೆದಿಲ್ಲ. ಅಷ್ಟರೊಳಗೆ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.

ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದರಿಂದ ಮೇವಾಲಾಲ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.

ಚೌಧರಿ ಬಿಹಾರ ಕೃಷಿ ವಿವಿಯ ಕುಲಪತಿಯಾಗಿದ್ದರು. ಈ ವೇಳೆ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮೇವಾಲಾಲ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.